ಭಾನುವಾರ, ನವೆಂಬರ್ 27, 2022
23 °C

Covid India Update| ಇಂದು 1,968 ಪ್ರಕರಣ: 15 ಸಾವು

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

 

ನವದೆಹಲಿ:  ಕಳೆದ 24 ಗಂಟೆಗಳಲ್ಲಿ ಭಾರತವು 1,968 ಹೊಸ ಕೋವಿಡ್‌ ಪ್ರಕರಣಗಳನ್ನು ಕಂಡಿದೆ. 133 ದಿನಗಳಲ್ಲಿ ದಾಖಲಾದ ಅತಿ ಕಡಿಮೆ ಪ್ರಕರಣಗಳಿವು. ಸದ್ಯ ದೇಶದ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 4,45,99,466 ಕ್ಕೆ ಏರಿದೆ.  

ದೇಶದಲ್ಲಿ ಪ್ರಸ್ತುತ 34,598 ಸಕ್ರಿಯ ಪ್ರಕರಣಗಳಿವೆ ಎಂಬುದು ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ತಿಳಿದು ಬಂದಿದೆ. 

ಈ ಒಂದು ದಿನದ ಅವಧಿಯಲ್ಲಿ ಕೋವಿಡ್‌ ಕಾರಣದಿಂದಾಗಿ 15 ಸಾವುಗಳಾಗಿವೆ. ಈ ಪೈಕಿ 8 ಸಾವುಗಳು ಕೇರಳದಿಂದಲೇ ವರದಿಯಾಗಿವೆ. ಇದರೊಂದಿಗೆ ಒಟ್ಟಾರೆ ಸಾವಿನ ಸಂಖ್ಯೆ 5,28,716 ಕ್ಕೆ ಏರಿದೆ.  

ದೇಶದ ದೈನಂದಿನ ಪಾಸಿಟಿವಿಟಿ ದರ ಶೇಕಡಾ 0.94 ರಷ್ಟು ಇದೆ.

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಈ ವರೆಗೆ 218.80 ಕೋಟಿ ಕೋವಿಡ್‌  ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು