ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಒಂದು ಕೋಟಿ ದಾಟಿದ ಸೋಂಕಿತರ ಸಂಖ್ಯೆ

Last Updated 20 ಡಿಸೆಂಬರ್ 2020, 6:56 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 26,624 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 341 ಮಂದಿ ಮೃತಪಟ್ಟಿದ್ದು, 29,690 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಶನಿವಾರದ ವೇಳೆಗೆ ಕೋವಿಡ್ ಸೋಂಕಿತರ ಸಂಖ್ಯೆಯು 10 ಮಿಲಿಯನ್ ದಾಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ, ದೇಶದಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ ಒಂದು ಕೋಟಿ (1,00,31,223) ಮೀರಿದ್ದು, 1,45,477 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು 95.80 ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,05,344 ಸಕ್ರಿಯ ಪ್ರಕರಣಗಳಿವೆ.

ಸಚಿವಾಲಯದ ಪ್ರಕಾರ, ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಭಾರತದ ಮಟ್ಟಿಗೆ ಕೋವಿಡ್-19 ಸಕ್ರಿಯ ಪ್ರಕರಣಗಳು ಹೆಚ್ಚಿವೆ. ಈ ಎರಡೂ ರಾಜ್ಯಗಳಿಂದ ಒಟ್ಟಾಗಿ ಭಾರತದ ಸಕ್ರಿಯ ಪ್ರಕರಣಗಳ ಪೈಕಿ ಶೇ 40ರಷ್ಟು ಪಾಲಿದೆ.

ಡಿಸೆಂಬರ್ 19ರ ವೇಳೆಗೆ 16,11,98,195 ಜನರ ಗಂಟಲುದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ನಿನ್ನೆ (ಶನಿವಾರ) 11,07,681 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ಜಾರ್ಖಂಡ್‌ನಲ್ಲಿ ಕೋವಿಡ್-19 ಒಟ್ಟು ಪ್ರಕರಣಗಳ ಸಂಖ್ಯೆ 1,12,853ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 247 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಭಾನುವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಮಿಳುನಾಡಿನಲ್ಲಿ 1,127 ಹೊಸ ಪ್ರಕರಣ

ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 1,127 ಪ್ರಕರಣಗಳು ವರದಿಯಾಗಿದ್ದು, 1,202 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 7,84,117ಕ್ಕೆ ಏರಿಕೆಯಾಗಿದೆ.

ತೆಲಂಗಾಣದಲ್ಲಿ 2.81 ಲಕ್ಷ ಮೀರಿದ ಸೋಂಕಿತರ ಸಂಖ್ಯೆ

ತೆಲಂಗಾಣದಲ್ಲಿ ಹೊಸದಾಗಿ 592 ಸೋಂಕು ಪ್ರಕರಣಗಳು ವರದಿಯಾಗಿದ್ದು, ಮೂರು ಜನರು ಸಾವಿಗೀಡಾಗಿದ್ದರೆ 643 ಮಂದಿ ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆಯು ತಿಳಿಸಿದೆ.ಈ ಮೂಲಕ ಸೋಂಕಿತರ ಸಂಖ್ಯೆಯು 2.81 ಲಕ್ಷಕ್ಕೂ ಅಧಿಕವಾಗಿದ್ದು, ಈವರೆಗೂ 2,73,013 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 6,888 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆಯು 1,513ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT