ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ 33,376 ಹೊಸ ಪ್ರಕರಣಗಳು ಪತ್ತೆ

Last Updated 11 ಸೆಪ್ಟೆಂಬರ್ 2021, 6:56 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ಒಂದೇ ದಿನದಲ್ಲಿ 33,376 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3.32 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ.

‘ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 308 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದ ಒಟ್ಟು ಸಾವಿನ ಸಂಖ್ಯೆಯು 4,42,317ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,91,516ಕ್ಕೆ ಹೆಚ್ಚಿದೆ. ಇದು ದೇಶದ ಒಟ್ಟು ಪ್ರಕರಣಗಳ ಪೈಕಿ ಶೇಕಡ 1.18ರಷ್ಟು ಪಾಲನ್ನು ಹೊಂದಿದೆ’ ಎಂದು ಸಚಿವಾಲಯ ತಿಳಿಸಿದೆ.

‘ದೇಶದ ಒಟ್ಟು ಕೋವಿಡ್‌ ಚೇತರಿಕೆ ಪ್ರಮಾಣವು ಶೇಕಡ 97.49ರಷ್ಟಿದೆ. ಶುಕ್ರವಾರ 15,92,135 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 54,01,96,989 ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ದೇಶದ ದೈನಂದಿನ ಸೋಂಕು ದೃಢ ದರವು ಶೇಕಡ 2.10ರಷ್ಟಿದೆ’ ಎಂದು ಸಚಿವಾಲಯವು ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 3,23,74,497 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸಾವಿನ ದರವು ಶೇಕಡ 1.33ರಷ್ಟು ಇದೆ. ದೇಶದಲ್ಲಿ ಇದುವರೆಗೆ 73.05 ಕೋಟಿ ಡೋಸ್‌ ಲಸಿಕೆಯನ್ನು ವಿತರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT