ನವದೆಹಲಿ: ದೇಶದಲ್ಲಿ ಕೋವಿಡ್ –19 ಪ್ರಕರಣಗಳ ಸಂಖ್ಯೆ ಮತ್ತೆ ದಿಢೀರ್ ಏರುಗತಿಗೆ ಹೊರಳಿದ್ದು, ಭಾನುವಾರ ಒಂದೇ ದಿನದಲ್ಲಿ ದೇಶದಾದ್ಯಂತ 3,824 ಪ್ರಕರಣಗಳು ವರದಿಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ ಆರು ತಿಂಗಳ ಅವಧಿಯಲ್ಲಿ (184 ದಿನಗಳಲ್ಲಿ) ಇದೇ ಮೊದಲ ಬಾರಿಗೆ ಸೋಂಕಿತ ಪ್ರಕರಣಗಳ ಸಂಖ್ಯೆ ಇಷ್ಟೊಂದು ಪ್ರಮಾಣದಲ್ಲಿ ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 18,389ಕ್ಕೆ ತಲುಪಿದೆ. ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ ಒಟ್ಟು 4,47,22,605ಕ್ಕೆ ಏರಿದೆ. ಚೇತರಿಕೆಯ ಪ್ರಮಾಣ ಶೇಕಡಾ 98.77ರಷ್ಟಿದೆ.
ಬೆಳಿಗ್ಗೆ 8 ಗಂಟೆವರೆಗೆ ನವೀಕರಿಸಿದ ಅಂಕಿ ಅಂಶ ಪ್ರಕಾರ, ಕಳೆದ 24 ತಾಸುಗಳಲ್ಲಿ ಕೋವಿಡ್ ಸೋಂಕಿನಿಂದ ಐವರು ಸಾವನ್ನಪ್ಪಿದ್ದು, ದೆಹಲಿ, ಹರಿಯಾಣ, ಕೇರಳ ಮತ್ತು ರಾಜಸ್ಥಾನದಲ್ಲಿ ಸಾವು ಸಂಭವಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.