ನವದೆಹಲಿ: ‘ದೇಶದಲ್ಲಿ ಭಾನುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ 41,157 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 3,11,06,065ಕ್ಕೆ ಏರಿಕೆಯಾಗಿದೆ. ಇದೇ ಸಂದರ್ಭದಲ್ಲಿ 518 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ.
ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 4,22,660ಕ್ಕೆ ಇಳಿಕೆಯಾಗಿದೆ. ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 1.36 ರಷ್ಟಿದ್ದರೆ, ಚೇತರಿಕೆ ಪ್ರಮಾಣವು ಶೇಕಡ 97.31ರಷ್ಟಿದೆ.
‘ಶನಿವಾರ 19,36,709 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಈವರೆಗೆ ದೇಶದಲ್ಲಿ 44,39,58,663 ಪರೀಕ್ಷೆಗಳನ್ನು ನಡೆಸಲಾಗಿದೆ. 3,02,69,796 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ಧಾರೆ. ಸಾವಿನ ಪ್ರಮಾಣವು ಶೇಕಡ 1.33 ರಷ್ಟಿದೆ. ದೇಶದಲ್ಲಿ ಈವರೆಗೆ 40.49 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ’ ಎಂದು ಸಚಿವಾಲಯ ತಿಳಿಸಿದೆ.
ದೇಶದ ದೈನಂದಿನ ಸೋಂಕು ದೃಢ ಪ್ರಮಾಣವು ಶೇಕಡ 2.13 ಮತ್ತು ಸಾಪ್ತಾಹಿಕ ಸೋಂಕು ದೃಢ ಪ್ರಮಾಣವು ಶೇಕಡ 2.08ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಮಹಾರಾಷ್ಟ್ರ(1,26,851),ಕರ್ನಾಟಕ(36,121), ತಮಿಳುನಾಡು (33,695), ದೆಹಲಿ (25,027), ಉತ್ತರ ಪ್ರದೇಶ(22,715), ಪಶ್ಚಿಮ ಬಂಗಾಳ(17,988) ಮತ್ತು ಪಂಜಾಬ್(16,224) ಸೇರಿದಂತೆ ದೇಶದಲ್ಲಿ ಈವರೆಗೆ 4,13,609 ಮಂದಿ ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.