India Covid Update: 4,194 ಹೊಸ ಪ್ರಕರಣ, 255 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,194 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 255 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,29,84,261 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,15,714 ಮಂದಿ ಸಾವಿಗೀಡಾಗಿದ್ದಾರೆ.
ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 4,24,26,328 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 42,219 ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಇದುವರೆಗೆ 179 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ.
ಸದ್ಯ ಕೇರಳದಲ್ಲಿ 11,840, ಮಹಾರಾಷ್ಟ್ರದಲ್ಲಿ 6,966, ಕರ್ನಾಟಕದಲ್ಲಿ 2,884, ತಮಿಳುನಾಡಿನಲ್ಲಿ 1,676 ಸಕ್ರಿಯ ಪ್ರಕರಣಗಳಿವೆ.
ಓದಿ... ಬಿಜೆಪಿ, ಎಎಪಿಗೆ ಅಭಿನಂದನೆ: ವ್ಯವಸ್ಥೆ ಬದಲಾಗಬೇಕು ಎಂದ ಟಬು ರಾವ್
#COVID19 | India logs 4,194 new cases, 6,208 recoveries, & 255 deaths, in the last 24 hours; Active cases stand at 42,219 pic.twitter.com/wORXmuzxVN
— ANI (@ANI) March 11, 2022
ಓದಿ... ಕಾಂಗ್ರೆಸ್ ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ: ಅನಿವಾರ್ಯ ಎಂದ ಶಶಿ ತರೂರ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.