ಶನಿವಾರ, ಮಾರ್ಚ್ 25, 2023
25 °C

India Covid-19 Update: ಸೋಂಕು ಪ್ರಮಾಣ ಏರಿಕೆ, ದೇಶದಲ್ಲಿ 42,766 ಹೊಸ ಪ್ರಕರಣ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 42,766 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,29,45,907ಕ್ಕೆ ಏರಿಕೆಯಾಗಿದೆ. ಅಲ್ಲದೆ 308 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 4,40,225ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ದೇಶದಲ್ಲಿ ಸದ್ಯ 4,10,048 ಸಕ್ರಿಯ ಪ್ರಕರಣಗಳಿದ್ದು, ದೇಶದ ಚೇತರಿಕೆ ಪ್ರಮಾಣ ಶೇ 97.42 ರಷ್ಟಿದೆ. ದಿನದ ಪಾಸಿಟಿವಿಟಿ ದರ ಶೇ 2.45ರಷ್ಟು ದಾಖಲಾಗಿದ್ದು, ವಾರದ ಪಾಸಿಟಿವಿಟಿ ದರವು ಶೇ 2.62 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 38,091 ಜನರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಈ ಮೂಲಕ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 3,21,38,092ಕ್ಕೆ ಏರಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಬೆಳಿಗ್ಗೆ 7 ಗಂಟೆಗೆ ಪ್ರಕಟವಾದ ಅಂಕಿ ಅಂಶಗಳ ಪ್ರಕಾರ, ಭಾರತದಲ್ಲಿ ಶನಿವಾರ 58.85 ಲಕ್ಷ ಲಸಿಕೆ ಡೋಸ್‌ಗಳನ್ನು ನೀಡಿದ್ದು, ಇದುವರೆಗೆ ಒಟ್ಟು 67.72 ಕೋಟಿ ಡೋಸ್‌ ನೀಡಲಾಗಿದೆ.

ಸೆಪ್ಟೆಂಬರ್ 04, ಶನಿವಾರದ ವೇಳೆಗೆ ದೇಶದಲ್ಲಿ 53,00,58,218 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 17,47,476 ಜನರನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

ಸೆಪ್ಟೆಂಬರ್ 04ರಂದು ದೇಶದಲ್ಲಿ 71,61,760 ಜನರಿಗೆ ಕೋವಿಡ್ ಲಸಿಕೆ ಡೋಸ್ ನೀಡಲಾಗಿದ್ದು, ಈ ಮೂಲಕ ಒಟ್ಟಾರೆ 68,46,69,521 ಜನರಿಗೆ ಲಸಿಕೆ ಡೋಸ್ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು