ಸೋಮವಾರ, ಮಾರ್ಚ್ 20, 2023
30 °C

Covid-19 India Update| 817 ಸಾವು, 45,892 ಪ್ರಕರಣ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಗುರುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 45,892 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಇದರಿಂದ, ಈಗ ಸೋಂಕಿತರ ಸಂಖ್ಯೆ 3.07 ಕೋಟಿ ದಾಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4.6 ಲಕ್ಷ ದಾಟಿದೆ.

ದೇಶದಲ್ಲಿ 817 ಸೋಂಕಿತರು ಮೃತಪಟ್ಟಿದ್ದಾರೆ. ಇವರಲ್ಲಿ ಮಹಾರಾಷ್ಟ್ರದ 326 ಮತ್ತು ಕೇರಳದ 148 ಮಂದಿ ಸೇರಿದ್ದಾರೆ. ಇದರಿಂದ, ಸಾವಿಗೀಡಾದವರ ಸಂಖ್ಯೆ 4,05,028ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರತಿ ದಿನದ ಪಾಸಿಟಿವಿಟಿ ದರವು ಶೇಕಡ 2.42 ದೃಢಪಟ್ಟಿದೆ. ಸತತ 17 ದಿನಗಳಿಂದ ಶೇಕಡ 3ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ದಾಖಲಾಗಿದೆ. ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2.98 ಕೋಟಿ ದಾಟಿದೆ. 

ಬುಧವಾರ 18.93 ಲಕ್ಷ ಪರೀಕ್ಷೆ ಕೈಗೊಳ್ಳಲಾಗಿದ್ದು, ಇದುವರೆಗೆ ಪರೀಕ್ಷೆ ನಡೆಸಿದ ಸಂಖ್ಯೆ 42.52 ಕೋಟಿಗೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ 36.48 ಕೋಟಿ ಡೋಸ್‌ಗಳನ್ನು ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು