ಸೋಮವಾರ, ಜುಲೈ 26, 2021
22 °C

India Covid-19 Update: ದೇಶದಲ್ಲಿಂದು 54,069 ಹೊಸ ಪ್ರಕರಣ, 1,321 ಜನ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 54,069 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,00,82,778ಕ್ಕೆ ಏರಿಕೆಯಾಗಿದೆ. ಅಲ್ಲದೆ 1,321 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 3,91,981ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ದೇಶದಲ್ಲಿ ಸದ್ಯ 6,27,057 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಪೈಕಿ ಶೇ 2.08ರಷ್ಟಾಗಿದೆ. ದೇಶದ ಚೇತರಿಕೆ ಪ್ರಮಾಣ ಸುಧಾರಿಸುವ ಮೂಲಕ ಶೇ 96.61 ರಷ್ಟಿದೆ.

ಬೆಳಿಗ್ಗೆ 7 ಗಂಟೆಗೆ ಪ್ರಕಟವಾದ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ದಿನವೊಂದಕ್ಕೆ 64.89 ಲಕ್ಷ ಲಸಿಕೆ ಡೋಸ್‌ಗಳನ್ನು ನೀಡಿದ್ದು, ಇದುವರೆಗೆ ಒಟ್ಟು 30.16 ಕೋಟಿ ಡೋಸ್‌ ನೀಡಲಾಗಿದೆ.

ದಿನದ ಪಾಸಿಟಿವಿಟಿ ಪ್ರಮಾಣ ಶೇ 2.91ರಷ್ಟು ದಾಖಲಾಗಿದ್ದು, ಇದು ಸತತ 17 ದಿನಗಳಿಗಿಂತ ಶೇ 5 ಕ್ಕಿಂತ ಕಡಿಮೆಯಾಗಿದೆ. ವಾರದ ಪಾಸಿಟಿವಿಟಿ ದರವು ಶೇ 3.04 ಕ್ಕೆ ಇಳಿದಿದೆ ಎಂದು ಸಚಿವಾಲಯ ತಿಳಿಸಿದೆ.

ಚೇತರಿಕೆಯ ಪ್ರಕರಣಗಳು ಸತತ 42ನೇ ದಿನಕ್ಕೆ ದೈನಂದಿನ ಹೊಸ ಪ್ರಕರಣಗಳನ್ನು ಮೀರಿಸುತ್ತಿವೆ. ಈ ಮೂಲಕ ಕೋವಿಡ್-19ನಿಂದ ಚೇತರಿಸಿಕೊಂಡವರ ಸಂಖ್ಯೆ 2,90,63,74ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ 1.30 ರಷ್ಟಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಜೂನ್ 23, ಬುಧವಾರದ ವೇಳೆಗೆ ದೇಶದಲ್ಲಿ 39,78,32,667 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 18,59,469 ಜನರನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು