ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India update: 60,753 ಹೊಸ ಪ್ರಕರಣಗಳು ಪತ್ತೆ, 1,647 ಮಂದಿ ಸಾವು

Last Updated 19 ಜೂನ್ 2021, 6:55 IST
ಅಕ್ಷರ ಗಾತ್ರ

ನವದೆಹಲಿ: ‘ದೇಶದಲ್ಲಿ ಒಂದೇ ದಿನದಲ್ಲಿ 60,753 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 2.98 ಕೋಟಿಗೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು 7.6 ಲಕ್ಷ ಸಕ್ರಿಯ ಪ್ರಕರಣಗಳಿವೆ. ಇದು 74 ದಿನಗಳಲ್ಲಿ ವರದಿಯಾದ ಅತಿ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೇಳಿದೆ.

ಶನಿವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 1,647 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 3.85 ಲಕ್ಷಕ್ಕೆ ಏರಿದೆ. ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣವು ಶೇಕಡ 2.55ರಷ್ಟು ಪಾಲನ್ನು ಹೊಂದಿದ್ದು, ದೇಶದ ಚೇತರಿಕೆ ಪ್ರಮಾಣವು ಶೇಕಡ 96.16ಕ್ಕೆ ಏರಿಕೆಯಾಗಿದೆ.

ಶುಕ್ರವಾರ 19 ಲಕ್ಷ ಮಂದಿಯನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇದುವರೆಗೆ ದೇಶದಲ್ಲಿ ಒಟ್ಟು 38.92 ಪರೀಕ್ಷೆಗಳನ್ನು ನಡೆಸಲಾಗಿದೆ. ದೈನಂದಿನ ಸೋಂಕು ದೃಢ ಪ್ರಮಾಣವು ಶೇಕಡ 2.98ರಷ್ಟಿದೆ. ಸತತ 12ನೇ ದಿನವೂ ಸೋಂಕು ದೃಢ ಪ್ರಮಾಣವು ಶೇಕಡ 5ಕ್ಕಿಂತ ಕಡಿಮೆ ದಾಖಲಾಗಿದೆ’ ಎಂದು ಸಚಿವಾಲಯವು ಹೇಳಿದೆ.

‘ದೇಶದಲ್ಲಿ ಈವರೆಗೆ2.86 ಕೋಟಿ ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.ಸಾವಿನ ಪ್ರಮಾಣವು ಶೇಕಡ 1.29ರಷ್ಟಿದೆ. ಒಟ್ಟು 27.23 ಕೋಟಿ ಕೋವಿಡ್‌ ಡೋಸ್‌ಗಳನ್ನು ನೀಡಲಾಗಿದೆ’ ಎಂದು ಸಚಿವಾಲಯವು ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT