ಮಂಗಳವಾರ, ಆಗಸ್ಟ್ 3, 2021
23 °C

ಭಾರತದಲ್ಲಿ ಕಳೆದ ವರ್ಷ ಹೆಚ್ಚಿನ ಮಕ್ಕಳು ಡಿಟಿಪಿ1 ಲಸಿಕೆ ಪಡೆದಿಲ್ಲ– ವಿಶ್ವಸಂಸ್ಥೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ‘ಕೋವಿಡ್‌–19’ ಸಾಂಕ್ರಾಮಿಕದಿಂದ ಉಂಟಾದ ಅಡೆತಡೆಗಳಿಂದ 2020ರಲ್ಲಿ ವಿಶ್ವದಾದ್ಯಂತ 2.3 ಕೋಟಿಯಷ್ಟು ಮಕ್ಕಳು ಪ್ರಾಥಮಿಕ ಹಂತದಲ್ಲಿ ಸಾಮಾನ್ಯವಾಗಿ ನೀಡುವ ಲಸಿಕೆಗಳಿಂದ ವಂಚಿತರಾಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಭಾರತದಲ್ಲಿ ಹೆಚ್ಚು ಸಂಖ್ಯೆಯ ಮಕ್ಕಳು ಡಿಟಿಪಿ (ಡಿಪ್ತೀರಿಯಾ–ಟೆಟನಸ್‌–ಪೆರಟುಸ್ಸಿಸ್‌) ಸಂಯೋಜಿತ ಲಸಿಕೆಯ ಮೊದಲ ಡೋಸ್‌ ಪಡೆಯಲು ಸಾಧ್ಯವಾಗಿಲ್ಲ ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯುನಿಸೆಫ್‌ ನೀಡಿದ ಅಂಕಿ ಅಂಶಗಳ ಪ್ರಕಾರ ಕಳೆದ ವರ್ಷ, ಈ 2.3 ಕೋಟಿ ಮಕ್ಕಳಿಗೆ ಪ್ರಾಥಮಿಕ ಹಂತದ ಲಸಿಕೆಗಳು ದೊರೆತಿಲ್ಲ. 2009ರಲ್ಲಿ ಇದೇ ರೀತಿ ಹೆಚ್ಚಿನ ಸಂಖ್ಯೆಯ ಮಕ್ಕಳು ಪ್ರಾಥಮಿಕ ಲಸಿಕೆಯಿಂದ ವಂಚಿತರಾಗಿದ್ದರು. 2019ರಲ್ಲಿ 37 ಲಕ್ಷಕ್ಕೂ ಹೆಚ್ಚು ಮಕ್ಕಳು ಲಸಿಕೆ ಪಡೆಯಲು ಸಾಧ್ಯವಾಗಿರಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು