ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಇಂದು 93,249 ಕೋವಿಡ್ ಪ್ರಕರಣ: 6 ತಿಂಗಳಲ್ಲೇ ಗರಿಷ್ಠ

Last Updated 4 ಏಪ್ರಿಲ್ 2021, 4:56 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಭಾನುವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 93,249 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 513 ಮಂದಿ ಮೃತಪಟ್ಟಿದ್ದಾರೆ. ಇದುಆರು ತಿಂಗಳಲ್ಲೇ ದಿನವೊಂದರಲ್ಲಿ ವರದಿಯಾಗಿರುವ ಗರಿಷ್ಠ ಪ್ರಕರಣಗಳಾಗಿವೆ.

ಇದರೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 1.24 ಕೋಟಿ ದಾಟಿದೆ. ಈವರೆಗೆ 1,64,623 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

1.16 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 6,91,597 ಸಕ್ರಿಯ ಪ್ರಕರಣಗಳಿವೆ.

ಈ ಮಧ್ಯೆ, ದೇಶದಾದ್ಯಂತ 7.59 ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT