ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update | 2,487 ಹೊಸ ಪ್ರಕರಣ, ಪಾಸಿಟಿವಿಟಿ ದರ ಶೇ 0.61ಕ್ಕೆ ಇಳಿಕೆ

ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2,487 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 13 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,31,21,599ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,214 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,25,79,693 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 17,692 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ 0.61 ರಷ್ಟಿದ್ದು,ಚೇತರಿಕೆ ಪ್ರಮಾಣ ಶೇ 98.74 ರಷ್ಟಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 3,936, ಕೇರಳದಲ್ಲಿ 3,393, ಕರ್ನಾಟಕದಲ್ಲಿ 1,868, ಮಹಾರಾಷ್ಟ್ರದಲ್ಲಿ 1,439, ಉತ್ತರಪ್ರದೇಶದಲ್ಲಿ 1,174 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT