ಗುರುವಾರ , ಅಕ್ಟೋಬರ್ 1, 2020
24 °C

ರಾಮಮಂದಿರ: ಪಾಕಿಸ್ತಾನದ‌ ಟೀಕೆಗೆ ಭಾರತ ಪ್ರತ್ಯುತ್ತರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯವನ್ನು ಟೀಕಿಸಿದ್ದ ಪಾಕಿಸ್ತಾನಕ್ಕೆ ಭಾರತವು ಕಟುವಾಗಿ ತಿರುಗೇಟು ನೀಡಿದೆ.

‘ಇದು ಭಾರತದ ಆಂತರಿಕ ವಿಷಯ. ಪಾಕಿಸ್ತಾನ ಹಸ್ತಕ್ಷೇಪ ಮಾಡಬಾರದು. ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸುವುದರಿಂದ ಪಾಕಿಸ್ತಾನ ದೂರ ಇರಬೇಕು’ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್‌ ಶ್ರೀವಾಸ್ತವ ಹೇಳಿದ್ದಾರೆ.

‘ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಮತ್ತು ಅಲ್ಪಸಂಖ್ಯಾತರಿಗೆ ಧಾರ್ಮಿಕ ಹಕ್ಕುಗಳನ್ನು ನಿರಾಕರಿಸಿರುವ ಪಾಕಿಸ್ತಾನ ಇಂತಹ ಹೇಳಿಕೆ ನೀಡುವುದು ಅಚ್ಚರಿ ಮೂಡಿಸುವುದಿಲ್ಲ’ ಎಂದು ತಿಳಿಸಿದ್ದಾರೆ.

ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದನ್ನು ಪಾಕಿಸ್ತಾನ ಬುಧವಾರ ಟೀಕಿಸಿತ್ತು.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು