ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ 44 ಸಾವಿರ ಪ್ರಕರಣಗಳು, ಕೇರಳದಲ್ಲೇ 30,000

Last Updated 27 ಆಗಸ್ಟ್ 2021, 5:18 IST
ಅಕ್ಷರ ಗಾತ್ರ

ನವದೆಹಲಿ: ಕೇರಳದಲ್ಲಿ ಕೋವಿಡ್‌–19 ದೃಢಪಟ್ಟ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿರುವುದರಿಂದ ಶುಕ್ರವಾರ 24 ಗಂಟೆಗಳ ಅಂತರದಲ್ಲಿ ದೇಶದ ಒಟ್ಟಾರೆ ಪ್ರಕರಣಗಳ ಸಂಖ್ಯೆ 44 ಸಾವಿರ ದಾಟಿದೆ. ಇದೇ ಅವಧಿಯಲ್ಲಿ 32,988 ಮಂದಿ ಗುಣಮುಖರಾಗಿದ್ದಾರೆ ಹಾಗೂ 496 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ಗುರುವಾರ ರಾತ್ರಿ ವರೆಗೂ ಕೇರಳದಲ್ಲಿ 30,007 ಹೊಸ ಪ್ರಕರಣಗಳು ಮತ್ತು 162 ಮಂದಿ ಸಾವಿಗೀಡಾಗಿರುವುದು ವರದಿಯಾಗಿದೆ. ದೇಶಾದ್ಯಂತ ಒಟ್ಟು 44,658 ಪ್ರಕರಣಗಳಲ್ಲಿ ಕೋವಿಡ್‌ ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 3.26 ಕೋಟಿ ದಾಟಿದೆ.

ಒಟ್ಟು ಪ್ರಕರಣಗಳ ಪೈಕಿ 3.18 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿದ್ದಾರೆ, ಚೇತರಿಕೆ ಪ್ರಮಾಣ ಶೇ 97.60ರಷ್ಟಿದೆ. ಹಾಗೂ ಕೋವಿಡ್‌ ಕಾರಣಗಳಿಂದಾಗಿ 4,36,861 ಜನ ಸಾವಿಗೀಡಾಗಿದ್ದಾರೆ. ಪ್ರಸ್ತುತ 3,44,899 ಕೋವಿಡ್‌ ಪ್ರಕರಣಗಳು ಸಕ್ರಿಯವಾಗಿವೆ.

ದೇಶದಾದ್ಯಂತ 61.22 ಕೋಟಿಗೂ ಅಧಿಕ ಡೋಸ್‌ ಲಸಿಕೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT