ಭಾನುವಾರ, ಜೂನ್ 26, 2022
21 °C

Covid–19 India Update| ಇಂದು ಒಂದು ಲಕ್ಷ ಪ್ರಕರಣ: ಎರಡು ತಿಂಗಳಲ್ಲೇ ಕನಿಷ್ಠ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದಲ್ಲಿ ಕೋವಿಡ್‌ 19 ಇಳಿಕೆ ಹಾದಿ ಕಂಡಿದ್ದು, ಸೋಮವಾರ 1,00,636 ಪ್ರಕರಣಗಳು ವರದಿಯಾಗಿವೆ. ಇದು ಈ ಎರಡು ತಿಂಗಳಲ್ಲೇ ಅತ್ಯಂತ ಕನಿಷ್ಠ.

ಇನ್ನು 24 ಗಂಟೆಗಳಲ್ಲಿ 2427 ಕೋವಿಡ್‌ ಸಂಬಂಧಿತ ಸಾವುಗಳೂ ಸಂಭವಿಸಿವೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿಯಿಂದ ಗೊತ್ತಾಗಿದೆ.

ಸದ್ಯ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 2,89,09,975 ಆಗಿದೆ. ಈ ವರೆಗೆ 2,71,59,180 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 14,01,609 ಸಕ್ರಿಯ ಪ್ರಕರಣಗಳು ದೇಶದಲ್ಲಿವೆ. ಇನ್ನು ಕೋವಿಡ್‌ನಿಂದಾಗಿ ದೇಶದಲ್ಲಿ ಈ ವರೆಗೆ 3,49,186 ಮಂದಿ ಮೃತಪಟ್ಟಿದ್ದಾರೆ.

ಭಾರತದಲ್ಲಿ ಇಲ್ಲಿಯ ವರೆಗೆ 23,27,86,482 ಮಂದಿಗೆ ಲಸಿಕೆ ಹಾಕಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು