ಮಂಗಳವಾರ, ಮೇ 17, 2022
24 °C

Covid-19 India Update: 11 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 94 ಮಂದಿ ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 11,067 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 94 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,08,58,371ಕ್ಕೆ ಏರಿಕೆಯಾಗಿದೆ. ಆ ಪೈಕಿ 1,55,252 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 1,05,61,608 ಗುಣಮುಖರಾಗಿದ್ದಾರೆ.

ಸದ್ಯ ದೇಶದಲ್ಲಿ 1,41,511 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಇದುವರೆಗೆ 66,11,561 ಮಂದಿ ಕೋವಿಡ್‌ ಲಸಿಕೆಯನ್ನು ಪಡೆದಿದ್ದಾರೆ.

ಸದ್ಯ ಕೇರಳದಲ್ಲಿ 64,390, ಮಹಾರಾಷ್ಟ್ರದಲ್ಲಿ 35,917, ಕರ್ನಾಟಕದಲ್ಲಿ 5,804 ತಮಿಳುನಾಡಿನಲ್ಲಿ 4,328 ಸಕ್ರಿಯ ಪ್ರಕರಣಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು