Covid-19 India Update: ಸೋಂಕಿನ ಪ್ರಮಾಣ ಗಣನೀಯ ಇಳಿಕೆ

ನವದೆಹಲಿ: ದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಶೇ 0.46 ಸೋಂಕಿತರು ಮಾತ್ರ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
146 ಜಿಲ್ಲೆಗಳಲ್ಲಿ ಕಳೆದ ಏಳು ದಿನಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ, ಶೇ 2.20 ಜನರು ಐಸಿಯುನಲ್ಲಿ ಹಾಗೂ ಶೇ 3.02 ಜನರಿಗೆ ಕೃತಕ ಆಮ್ಲಜನಕ ಅಳವಡಿಸಲಾಗಿದೆ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ದೇಶದಲ್ಲಿ ಪ್ರತಿನಿತ್ಯ 12 ಲಕ್ಷ ಪರೀಕ್ಷೆಗಳು ನಡೆಯುತ್ತಿದ್ದು, ಕಳೆದ 24 ಗಂಟೆಯಲ್ಲಿ 12 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1.73 ಲಕ್ಷಕ್ಕೆ ಇಳಿಕೆಯಾಗಿದೆ.
ಬ್ರಿಟನ್‌ನಲ್ಲಿ ಮೊದಲು ಕಾಣಿಸಿಕೊಂಡ ರೂಪಾಂತರಗೊಂಡ ವೈರಾಣು ದೇಶದಲ್ಲಿ 165 ಜನರಲ್ಲಿ ಪತ್ತೆಯಾಗಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ’ ಎಂದರು.
ಕೋವಿಡ್ ಲಸಿಕೆ ಅಭಿಯಾನ ಈಗಾಗಲೇ ಮುಂದುವರಿದಿದ್ದು, ಈವರೆಗೆ 23,55,979 ಮಂದಿ ಲಸಿಕೆ ಪಡೆದಿದ್ದಾರೆ. ಸದ್ಯ ಕೇರಳದಲ್ಲಿ 72,476, ಮಹಾರಾಷ್ಟ್ರದಲ್ಲಿ 44,624, ಕರ್ನಾಟಕದಲ್ಲಿ 6,317 ಸಕ್ರಿಯ ಪ್ರಕರಣಗಳಿವೆ.
India reports 11,666 new #COVID19 cases, 14,301 discharges and 123 deaths in last 24 hours, as per Union Health Ministry
Total cases: 1,07,01,193
Active cases: 1,73,740
Total discharges: 1,03,73,606
Death toll: 1,53,847Total vaccinated: 23,55,979 pic.twitter.com/t4MICy4ito
— ANI (@ANI) January 28, 2021
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.