ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Update: ಹೊಸದಾಗಿ 12,608 ಪ್ರಕರಣ ದೃಢ, 72 ಸಾವು

Last Updated 18 ಆಗಸ್ಟ್ 2022, 5:17 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಗುರುವಾರ ಬೆಳಿಗ್ಗೆ ಕೊನೆಗೊಂಡ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 12,608 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 72 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಅವಧಿಯಲ್ಲಿ 16,251 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ವರೆಗೆ ಒಟ್ಟು 4,36,70,315 ಮಂದಿ ಚೇತರಿಸಿಕೊಂಡಿದ್ದಾರೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,01,343ಕ್ಕೆ ಇಳಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ ಶೇ 0.23 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ಕಳೆದ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳಲ್ಲಿ 3,715ರಷ್ಟು ಇಳಿಕೆಯಾಗಿದೆ.

ದೇಶದಲ್ಲಿ ಈವರೆಗೆ 4,42,98,864 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,27,206 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 3.48ಕ್ಕೆ ತಲುಪಿದೆ. ವಾರದ ಪಾಸಿಟಿವಿಟಿ ಪ್ರಮಾಣ ಶೇ 4.20 ಆಗಿದೆ.

ದೇಶದಲ್ಲಿ ಈವರೆಗೆ 88.14 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 208.95 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.58 ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT