ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಮುಖ

Last Updated 24 ಜನವರಿ 2021, 6:14 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಹೊಸದಾಗಿ ಪತ್ತೆಯಾಗುವ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗಿದೆ.

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 14,849 ಹೊಸ ಪ್ರಕರಣಗಳು ದೃಢಪಟ್ಟಿದ್ದು, 155 ಮಂದಿ ಸೊಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 1,06,54,533ಕ್ಕೆ ಏರಿಕೆಯಾಗಿದೆ. ಆ ಪೈಕಿ 1,53,339 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಈವರೆಗೆ 1,03,16,786 ಸೋಂಕಿತರು ಗುಣಮುಖರಾಗಿದ್ದು, ಸದ್ಯ 1,84,408 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಕೋವಿಡ್‌ ಲಸಿಕೆ ಅಭಿಯಾನ ನಡೆಯುತ್ತಿದ್ದು, ಇದುವರೆಗೆ 15,82,201 ಮಂದಿ ಲಸಿಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT