India Covid-19 Update: 15 ಸಾವಿರಕ್ಕೂ ಅಧಿಕ ಹೊಸ ಪ್ರಕರಣ, 278 ಮಂದಿ ಸಾವು

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 15,102 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 278 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,28,67,031ಕ್ಕೆ ಏರಿಕೆಯಾಗಿದೆ. ಆ ಪೈಕಿ 5,12,622 ಮಂದಿ ಸಾವಿಗೀಡಾಗಿದ್ದಾರೆ.
ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 4,21,89,887 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,64,522 ಸಕ್ರಿಯ ಪ್ರಕರಣಗಳಿವೆ.
India reports 15,102 fresh #COVID19 cases, 31,377 recoveries, and 278 deaths in the last 24 hours.
Active case: 1,64,522 (0.38%)
Daily positivity rate: 1.28%
Total recoveries: 4,21,89,887
Death toll: 5,12,622Total vaccination: 1,76,19,39,020 pic.twitter.com/hEWKwEjOu9
— ANI (@ANI) February 23, 2022
ದೈನಂದಿನ ಪಾಸಿಟಿವಿಟಿ ದರ ಶೇ 1.28 ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದುಬಂದಿದೆ. ದೇಶದಲ್ಲಿ ಇದುವರೆಗೆ 1,76,19,39,020 ಕೋಟಿ ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.