ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಒಂದೇ ದಿನ 16 ಸಾವಿರಕ್ಕೂ ಅಧಿಕ ಪ್ರಕರಣ

Last Updated 5 ಮಾರ್ಚ್ 2021, 5:42 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 16,838 ಹೊಸ ಪ್ರಕರಣಗಳು ದಾಖಲಾಗಿದ್ದು, 113 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,11,73,761 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 1,57,548 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದುವರೆಗೆ 1,08,39,894 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,76,319 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರ, ಕೇರಳ, ಕರ್ನಾಟಕ, ಪಂಜಾಬ್‌ನಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ 86,359, ಕೇರಳದಲ್ಲಿ 44,734, ಪಂಜಾಬ್‌ 6,264, ಕರ್ನಾಟಕದಲ್ಲಿ 6,147, ತಮಿಳುನಾಡಿನಲ್ಲಿ 3,978 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಎರಡನೇ ಹಂತದ ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿದೆ. ಇದುವರೆಗೆ 1,80,05,503 ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT