ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದೆ. 24 ಗಂಟೆಗಳ ಅಂತರದಲ್ಲಿ ಕೋವಿಡ್–19 ದೃಢಪಟ್ಟ 1,68,912 ಹೊಸ ಪ್ರಕರಣಗಳು ದಾಖಲಾಗಿವೆ, ಇದೇ ಅವಧಿಯಲ್ಲಿ 904 ಮಂದಿ ಸಾವಿಗೀಡಾಗಿದ್ದಾರೆ.

ಸೋಮವಾರ ಬೆಳಗ್ಗಿನ ವರೆಗೂ 75,086 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ಪ್ರಸ್ತುತ ದೇಶದಲ್ಲಿ 12,01,009 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 1,35,27,717ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1,21,56,529 ಮಂದಿ ಗುಣಮುಖರಾಗಿದ್ದಾರೆ ಹಾಗೂ 1,70,179 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಪ್ರಕರಣಗಳ ಪಟ್ಟಿಯಲ್ಲಿ ಬ್ರೆಜಿಲ್ ಹಿಂದಕ್ಕಿಟ್ಟು ಭಾರತ ಎರಡನೇ ಸ್ಥಾನಕ್ಕೇರಿದೆ. ಬ್ರೆಜಿಲ್ನಲ್ಲಿ ಒಟ್ಟು 1,34,82,543 ಪ್ರಕರಣಗಳು ದಾಖಲಾಗಿವೆ.

ದೇಶದಾದ್ಯಂತ ಈವರೆಗೂ 10.45 ಕೋಟಿಗೂ ಅಧಿಕ ಡೋಸ್ಗಳಷ್ಟು ಲಸಿಕೆ ಹಾಕಲಾಗಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್ನಲ್ಲಿ ಹೆಚ್ಚಿದ ಕೊರೊನಾ ಸೋಂಕು; ಭೌತಿಕ ವಿಚಾರಣೆ ಸ್ಥಗಿತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.