ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Update: ದೇಶದಲ್ಲಿ ಹೊಸದಾಗಿ 18,257 ಪ್ರಕರಣ ದೃಢ

ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಭಾನುವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 18,257 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 14,553 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,28,690ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳಲ್ಲಿ (3,662) ಹೆಚ್ಚಳ ಕಂಡುಬಂದಿದೆ.

ಈ ಅವಧಿಯಲ್ಲಿ 42 ಮಂದಿ ಮೃತಪಟ್ಟಿದ್ದು, ಇದುವರೆಗೆ ಒಟ್ಟು5,25,428 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ದೈನಂದಿನ ಕೋವಿಡ್ ದೃಢ ಪ್ರಮಾಣ 4.22 ಆಗಿದೆ.

ದೇಶದಲ್ಲಿ ಈವರೆಗೆ 4,36,22,651 ಮಂದಿಗೆ ಕೊರೊನಾ ಸೋಂಕು ತಗುಲಿದೆ.

ಹಾಗೆಯೇ 198.76 ಕೋಟಿಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT