Covid-19 India Update: 18 ಸಾವಿರ ಹೊಸ ಪ್ರಕರಣ, 108 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 18,327 ಹೊಸ ಪ್ರಕರಣಗಳು ದಾಖಲಾಗಿದ್ದು, 108 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,11,92,088 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 1,57,656 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದುವರೆಗೆ 1,08,54,128 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,80,304 ಸಕ್ರಿಯ ಪ್ರಕರಣಗಳಿವೆ.
ಮಹಾರಾಷ್ಟ್ರ, ಕೇರಳ, ಕರ್ನಾಟಕ, ಪಂಜಾಬ್‌ನಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ 90,055, ಕೇರಳದಲ್ಲಿ 43,856, ಪಂಜಾಬ್ 6,661, ಕರ್ನಾಟಕದಲ್ಲಿ 6,393, ತಮಿಳುನಾಡಿನಲ್ಲಿ 3,954 ಸಕ್ರಿಯ ಪ್ರಕರಣಗಳಿವೆ.
ದೇಶದಾದ್ಯಂತ ಎರಡನೇ ಹಂತದ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದ್ದು, ಇದುವರೆಗೆ 1,94,97,704 ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ.
India reports 18,327 new #COVID19 cases, 14,234 discharges and 108 deaths in the last 24 hours, as per the Union Health Ministry
Total cases: 1,11,92,088
Total discharges: 1,08,54,128
Death toll: 1,57,656
Active cases: 1,80,304Total vaccination: 1,94,97,704 pic.twitter.com/9X3a7jwxth
— ANI (@ANI) March 6, 2021
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.