ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Updates | 18,815 ಹೊಸ ಪ್ರಕರಣ, 38 ಮಂದಿ ಸೋಂಕಿತರು ಸಾವು

ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 18,815 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 38 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,35,85,554ಕ್ಕೆ ಏರಿಕೆಯಾಗಿದೆ. ಆ ಪೈಕಿ 5,25,343 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,29,37,876 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,22,335 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 4.96 ರಷ್ಟಿದೆ.

ಕೇರಳದಲ್ಲಿ 29,772, ಮಹಾರಾಷ್ಟ್ರದಲ್ಲಿ 19,413, ತಮಿಳುನಾಡಿನಲ್ಲಿ 18,378, ಪಶ್ಚಿಮ ಬಂಗಾಳದಲ್ಲಿ 16,546, ಕರ್ನಾಟಕದಲ್ಲಿ 6,454 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಒಟ್ಟು 198.51 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT