ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update: 19 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 673 ಮಂದಿ ಸಾವು

Last Updated 20 ಫೆಬ್ರುವರಿ 2022, 4:28 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 19,968 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 673 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,28,22,473 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,11,903 ಮಂದಿ ಸಾವಿಗೀಡಾಗಿದ್ದಾರೆ.

ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 4,20,86,383 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 2,24,187 ಸಕ್ರಿಯ ಪ್ರಕರಣಗಳಿವೆ.

ದೈನಂದಿನ ಪಾಸಿಟಿವಿಟಿ ದರ ಶೇ 1.68 ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದುಬಂದಿದೆ.

ದೇಶದಲ್ಲಿ ಇದುವರೆಗೆ 1,75,37,22,697 ಕೋಟಿ ಡೋಸ್‌ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ.

ಸದ್ಯ ಕೇರಳದಲ್ಲಿ 75,813, ಮಹಾರಾಷ್ಟ್ರದಲ್ಲಿ 22,354, ತಮಿಳುನಾಡಿನಲ್ಲಿ 18,164, ಕರ್ನಾಟಕದಲ್ಲಿ 13,468, ಆಂಧ್ರ ಪ್ರದೇಶದಲ್ಲಿ 7,358 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT