India Covid Update: ದೇಶದಲ್ಲಿ 2.85 ಲಕ್ಷ ಹೊಸ ಪ್ರಕರಣ, 2.99 ಲಕ್ಷ ಗುಣಮುಖ

ನವದೆಹಲಿ: ಬುಧವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 2,85,914 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮೂಲಕ ಕಳೆದ ದಿನಕ್ಕೆ ಹೋಲಿಸಿದಾಗ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿವೆ. ಮಂಗಳವಾರದಂದು 2.55 ಲಕ್ಷ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.
ಇದನ್ನೂ ಓದಿ: Covid Karnataka Update| ರಾಜ್ಯದಲ್ಲಿ ಇಂದು 41,400 ಪ್ರಕರಣ ಪತ್ತೆ
ಇದೇ ಅವಧಿಯಲ್ಲಿ 2,99,073 ಮಂದಿ ಗುಣಮುಖರಾಗಿರುವುದು ಅಲ್ಪ ನಿರಾಳತೆ ಮೂಡಿಸಿದೆ. ಕೊರೊನಾ ಸೋಂಕಿನಿಂದ ಇದುವರೆಗೆ ಒಟ್ಟು 3,73,70,971 ಮಂದಿ ಚೇತರಿಸಿಕೊಂಡಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 665 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,23,018ಕ್ಕೆ ತಲುಪಿದೆ.
ದೈನಂದಿನ ಕೋವಿಡ್ ದೃಢ ಪ್ರಮಾಣವು ಶೇಕಡ 16.16 ಆಗಿದೆ.
ದೇಶದಲ್ಲಿ ಇದುವರೆಗೆ 163.58 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
#Unite2FightCorona#LargestVaccineDrive#OmicronVariant
𝗖𝗢𝗩𝗜𝗗 𝗙𝗟𝗔𝗦𝗛https://t.co/qbZ84yNXqH pic.twitter.com/hnALQ2qxox
— Ministry of Health (@MoHFW_INDIA) January 26, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.