ಶನಿವಾರ, ಮೇ 28, 2022
31 °C

India Covid Update: ದೇಶದಲ್ಲಿ 2.86 ಲಕ್ಷ ಹೊಸ ಪ್ರಕರಣ, 3.06 ಲಕ್ಷ ಗುಣಮುಖ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಗುರುವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 2,86,384 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೂಲಕ ಬುಧವಾರಕ್ಕೆ ಹೋಲಿಸಿದಾಗ ಅಲ್ಪ ಏರಿಕೆ ಕಂಡುಬಂದಿದೆ. ಬುಧವಾರದಂದು 2.85 ಲಕ್ಷ ಕೋವಿಡ್ ಪ್ರಕರಣಗಳು ದಾಖಲಾಗಿದ್ದವು.

ಕಳೆದ 24 ತಾಸಿನಲ್ಲಿ 573 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 

3,06,357 ಮಂದಿ ಗುಣಮುಖರಾಗಿದ್ದು, ಒಟ್ಟು 3,76,77,328 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೇಶದಲ್ಲಿ ಸಕ್ರಿಯ ಪ್ರಕರಣ ಸಂಖ್ಯೆ 22,02,472ಕ್ಕೆ ತಲುಪಿದೆ. ದೈನಂದಿನ ಕೋವಿಡ್ ದೃಢ ಪ್ರಮಾಣವು ಶೇಕಡ 19.59 ಆಗಿದೆ.

ಕಳೆದ 24 ತಾಸಿನಲ್ಲಿ 14,62,261 ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ. ಹಾಗೆಯೇ ಇದುವರೆಗೆ ಒಟ್ಟು 72.21 ಕೋಟಿ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ.

ದೇಶದಲ್ಲಿ 163.84 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು