ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 24 ಗಂಟೆಗಳಲ್ಲಿ 2 ಲಕ್ಷಕ್ಕೂ ಅಧಿಕ ಕೋವಿಡ್‌ ಪ್ರಕರಣ

Last Updated 15 ಏಪ್ರಿಲ್ 2021, 5:23 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಗುರುವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌–19 ದೃಢಪಟ್ಟ 2,00,739 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 1,038 ಮಂದಿ ಸೋಂಕಿನಿಂದ ಸಾವಿಗೀಡಾಗಿರುವುದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

ಸತತ ಎರಡನೇ ದಿನ ಸಾವಿನ ಸಂಖ್ಯೆ 1,000 ದಾಟಿದೆ. ಕೋವಿಡ್‌ ಪ್ರಕರಣ ಹೆಚ್ಚುತ್ತಿರುವ ಮಹಾರಾಷ್ಟ್ರ ಸರ್ಕಾರವು ಸೋಂಕು ನಿಯಂತ್ರಣಕ್ಕಾಗಿ ನಿಷೇಧಾಜ್ಞೆ, ವಾರಾಂತ್ಯದ ಲಾಕ್‌ಡೌನ್‌, ಕರ್ಫ್ಯೂ ಕ್ರಮಗಳನ್ನು ಅವಳವಡಿಸಿಕೊಂಡಿದೆ. ದೆಹಲಿ, ಹರಿಯಾಣ, ಗುಜರಾತ್‌, ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳು ರಾತ್ರಿ ಕರ್ಫ್ಯೂ ವಿಧಿಸಿಕೊಂಡಿವೆ.

ಮುನ್ನೆಚ್ಚರಿಕೆ ಕ್ರಮದ ಭಾಗವಾಗಿ ಬುಧವಾರ ಕೇಂದ್ರ ಸರ್ಕಾರವು ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಪಡಿಸಿತು ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿದೆ. ಕೋವಿಡ್‌ ಎರಡನೇ ಅಲೆಯು ವ್ಯಾಪಿಸುತ್ತಿದ್ದು, ಶೀಘ್ರವೇ 45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳುವಂತೆ ಸರ್ಕಾರಗಳು ಜನರಿಗೆ ಮನವಿ ಮಾಡುತ್ತಿವೆ.

ಪ್ರಸ್ತುತ ದೇಶದಲ್ಲಿ 14,71,877 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1,24,29,564 ಮಂದಿ ಗುಣಮುಖರಾಗಿದ್ದಾರೆ ಹಾಗೂ 1,73,123 ಮಂದಿ ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್‌ನಿಂದ 93,528 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ದೇಶದಾದ್ಯಂತ 11.44 ಕೋಟಿಗೂ ಅಧಿಕ ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT