ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India Covid Updates | ಸಕ್ರಿಯ ಪ್ರಕರಣಗಳ ಸಂಖ್ಯೆ 1.50 ಲಕ್ಷಕ್ಕೆ ಏರಿಕೆ

ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 21,411 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 67 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,38,68,476 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,25,997 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,31,92,379 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,50,100 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 4.46 ರಷ್ಟಿದೆ.

ಪಶ್ಚಿಮ ಬಂಗಾಳದಲ್ಲಿ 26,727, ಕೇರಳದಲ್ಲಿ 20,896, ತಮಿಳುನಾಡಿನಲ್ಲಿ 16,153, ಮಹಾರಾಷ್ಟ್ರದಲ್ಲಿ 14,579, ಕರ್ನಾಟಕದಲ್ಲಿ 8,488 ಸಕ್ರಿಯ ಪ್ರಕರಣಗಳಿವೆ.

ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಶುಕ್ರವಾರ ಹೊಸದಾಗಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 1,562 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ.

ದೇಶದಾದ್ಯಂತ ಒಟ್ಟು 201.68 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT