ಭಾನುವಾರ, ಜೂನ್ 26, 2022
27 °C

Covid India Update | 2,364 ಹೊಸ ಪ್ರಕರಣ, ಪಾಸಿಟಿವಿಟಿ ದರ ಶೇ 0.50ಕ್ಕೆ ಏರಿಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2,364 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

ಇದರೊಂದಿಗೆ ಸೋಂಕಿತರ ಸಂಖ್ಯೆ 4,31,29,563 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,303 ಮಂದಿ ಸಾವಿಗೀಡಾಗಿದ್ದಾರೆ. 

ಇದುವರೆಗೆ 4,25,89,841 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 15,419 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ 0.50 ರಷ್ಟಿದೆ.

ಕೇರಳದಲ್ಲಿ 3,555, ದೆಹಲಿಯಲ್ಲಿ 2,675, ಕರ್ನಾಟಕದಲ್ಲಿ 1,761, ಮಹಾರಾಷ್ಟ್ರದಲ್ಲಿ 1,605, ಹರಿಯಾಣದಲ್ಲಿ 1,324, ಉತ್ತರ ಪ್ರದೇಶದಲ್ಲಿ 948 ಸಕ್ರಿಯ ಪ್ರಕರಣಗಳಿವೆ.

ಓದಿ... ರಾಜೀವ್ ಗಾಂಧಿ ಹತ್ಯೆ ಅಪರಾಧಿ ಬಿಡುಗಡೆ: ಸಿಎಂ ಸ್ಟಾಲಿನ್ ಭೇಟಿಯಾದ ಪೇರರಿವಾಳನ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು