ಬುಧವಾರ, ಸೆಪ್ಟೆಂಬರ್ 29, 2021
20 °C

Covid-19 India Update: 25,404 ಹೊಸ ಪ್ರಕರಣ ದೃಢ, 339 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ 25,404 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 339 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,32,89,579 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,43,213 ಮಂದಿ ಸಾವಿಗೀಡಾಗಿದ್ದಾರೆ.

ಹೊಸದಾಗಿ 37,127 ಮಂದಿ ಚೇತರಿಸಿಕೊಂಡಿದ್ದು, ಇದುವರೆಗೆ 3,24,84,159 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 3,62,207 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ ಸೋಮವಾರ ಹೊಸದಾಗಿ 15,058 ಪ್ರಕರಣಗಳು ಪತ್ತೆಯಾಗಿದ್ದು, 99 ಮಂದಿ ಕೊನೆಯುಸಿರೆಳೆದಿದ್ದಾರೆ.

ಸದ್ಯ ಕೇರಳದಲ್ಲಿ 2,09,335, ಮಹಾರಾಷ್ಟ್ರದಲ್ಲಿ 53,427, ತಮಿಳುನಾಡಿನಲ್ಲಿ 16,522, ಕರ್ನಾಟಕದಲ್ಲಿ 16,269, ಆಂಧ್ರ ಪ್ರದೇಶದಲ್ಲಿ 14,652 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಈವರೆಗೆ 75,22,38,324 ಕೋವಿಡ್‌ ಡೋಸ್‌ ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ... IND vs ENG: ಮುಂದಿನ ವರ್ಷ ಎರಡು ಹೆಚ್ಚುವರಿ ಟಿ–20 ಪಂದ್ಯ: ಬಿಸಿಸಿಐ ಸ್ಪಷ್ಟನೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು