ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid India Update | 2,628 ಹೊಸ ಪ್ರಕರಣ, ಪಾಸಿಟಿವಿಟಿ ದರ ಶೇ 0.58ಕ್ಕೆ ಏರಿಕೆ

ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2,628 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 18 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಬುಧವಾರಕ್ಕೆ ಹೋಲಿಸಿದರೆ, ಇಂದು (ಗುರುವಾರ) ದೈನಂದಿನ ಹೊಸ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡುಬಂದಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,31,44,820ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,525 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,26,04,881 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 15,414 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ 0.58 ರಷ್ಟಿದೆ.

ಕೇರಳದಲ್ಲಿ 4,313, ಮಹಾರಾಷ್ಟ್ರದಲ್ಲಿ 2,175, ಕರ್ನಾಟಕದಲ್ಲಿ 1,799, ದೆಹಲಿಯಲ್ಲಿ 1,762, ಹರಿಯಾಣದಲ್ಲಿ 1,041, ಉತ್ತರ ಪ್ರದೇಶದಲ್ಲಿ 830 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಒಟ್ಟು 192.82 ಕೋಟಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT