ಭಾನುವಾರ, ಜೂನ್ 26, 2022
27 °C
16,308 ಸಕ್ರಿಯ ಪ್ರಕರಣ

Covid India Update | ಕೇರಳ, ಮಹಾರಾಷ್ಟ್ರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಏರಿಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2,685 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 33 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

ಇದರೊಂದಿಗೆ ಸೋಂಕಿತರ ಸಂಖ್ಯೆ 4,31,50,215 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,572 ಮಂದಿ ಸಾವಿಗೀಡಾಗಿದ್ದಾರೆ. 

ಇದುವರೆಗೆ 4,26,09,335 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 16,308 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ 0.60 ರಷ್ಟಿದೆ.

ಕೇರಳದಲ್ಲಿ 4,723, ಮಹಾರಾಷ್ಟ್ರದಲ್ಲಿ 2,568,  ಕರ್ನಾಟಕದಲ್ಲಿ 1,827, ದೆಹಲಿಯಲ್ಲಿ 1,627, ಹರಿಯಾಣದಲ್ಲಿ 1,096, ಉತ್ತರ ಪ್ರದೇಶದಲ್ಲಿ 818 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಒಟ್ಟು 193.13 ಕೋಟಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು