Covid-19 India Update: 24 ಗಂಟೆಗಳಲ್ಲಿ 42,942 ಮಂದಿ ಗುಣಮುಖ, 290 ಸಾವು

ನವದೆಹಲಿ: ಭಾರತದಾದ್ಯಂತ 24 ಗಂಟೆಗಳ ಅಂತರದಲ್ಲಿ ಮಂಗಳವಾರ ಬೆಳಿಗ್ಗೆ 8ರವರೆಗೂ ಕೋವಿಡ್–19 ದೃಢಪಟ್ಟ 31,222 ಹೊಸ ಪ್ರಕರಣಗಳು ದಾಖಲಾಗಿವೆ.
ಇದೇ ಅವಧಿಯಲ್ಲಿ ಸೋಂಕಿನಿಂದ 42,942 ಮಂದಿ ಗುಣಮುಖರಾಗಿದ್ದು, ಗುಣಮುಖ ಪ್ರಮಾಣ ಶೇ 97.48ರಷ್ಟಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.
ಪ್ರಸ್ತುತ 3,92,864 ಪ್ರಕರಣಗಳು ಸಕ್ರಿಯವಾಗಿವೆ. ವಾರದಲ್ಲಿ ಕೋವಿಡ್ ದೃಢ ಪ್ರಮಾಣ ಶೇ 2.56ರಷ್ಟಿದೆ ಹಾಗೂ ಕಳೆದ 74 ದಿನಗಳಲ್ಲಿ ಶೇ 3ಕ್ಕಿಂತಲೂ ಕಡಿಮೆ ದಾಖಲಾಗಿದೆ.
ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,30,58,843ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3,22,24,937 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 4,41,042 ಮಂದಿ ಮೃತಪಟ್ಟಿದ್ದಾರೆ. 24 ಗಂಟೆಗಳಲ್ಲಿ ಕೋವಿಡ್ ಕಾರಣಗಳಿಂದಾಗಿ 290 ಮಂದಿ ಸಾವಿಗೀಡಾಗಿದ್ದಾರೆ.
ದೇಶದಾದ್ಯಂತ ಈವರೆಗೂ 69,90,62,776 ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ.
#IndiaFightsCorona:#COVID19Vaccination Status (As on 7th September 2021, 8:00 AM)
✅Total vaccine doses administered (so far): 69,90,62,776
✅Vaccine doses administered (in last 24 hours): 1,13,53,571#We4Vaccine #LargestVaccinationDrive@ICMRDELHI @DBTIndia pic.twitter.com/HtnMAmdUhl
— #IndiaFightsCorona (@COVIDNewsByMIB) September 7, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.