ಗುರುವಾರ , ಮೇ 13, 2021
16 °C

Covid-19 India Updates: 3.14 ಲಕ್ಷ ಹೊಸ ಪ್ರಕರಣ, 2,104 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 3,14,835 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,59,30,965ಕ್ಕೆ ಏರಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 22,91,428 ರಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ.

ಇದೇ ಅವಧಿಯಲ್ಲಿ ಕೊರೊನಾದಿಂದ ದೇಶದಲ್ಲಿ 2,104 ಮಂದಿ ಮೃತಪಟ್ಟಿದ್ದು, ಈವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆ 1,84,657ಕ್ಕೆ ಏರಿದೆ.

ದೇಶದಾದ್ಯಂತ ಈವರೆಗೆ ಕೋವಿಡ್‌ನಿಂದ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1,34,54,880ಕ್ಕೆ ಏರಿದೆ.

ಮಹಾರಾಷ್ಟ್ರದಲ್ಲಿ 6,97,467, ಉತ್ತರ ಪ್ರದೇಶದಲ್ಲಿ 2,42,265, ಕೇರಳದಲ್ಲಿ 1,35,957, ಕರ್ನಾಟಕದಲ್ಲಿ 1,76,207, ತಮಿಳುನಾಡಿನಲ್ಲಿ 84,361 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಪ್ರಕಾರ ಏಪ್ರಿಲ್ 21 ರವರೆಗೆ 27,27,05,103 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಬುಧವಾರ ಒಂದೇ ದಿನ 16,51,711 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಇದನ್ನೂ ಓದಿ... ಗಂಭೀರ ಸ್ಥಿತಿ ಕೇಂದ್ರಕ್ಕೆ ಏಕೆ ಅರ್ಥವಾಗುತ್ತಿಲ್ಲ?: ದೆಹಲಿ ಹೈಕೋರ್ಟ್‌ ಪ್ರಶ್ನೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು