India Covid Update: ದೇಶದಲ್ಲಿ ಕೋವಿಡ್ ಪ್ರಕರಣ ಅಲ್ಪ ಇಳಿಕೆ

ನವದೆಹಲಿ: ಶನಿವಾರಕ್ಕೆ ಹೋಲಿಸಿದರೆ ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಭಾನುವಾರ ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ತಾಸಿನಲ್ಲಿ ದೇಶದಲ್ಲಿ ಹೊಸದಾಗಿ 3,33,533 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ತಿಳಿಸಿದೆ.
ಈ ಮೂಲಕ ಕಳೆದ ದಿನಕ್ಕಿಂತ 4,171ರಷ್ಟು ಕೋವಿಡ್ ಪ್ರಕರಣಗಳು ಕಡಿಮೆ ದಾಖಲಾಗಿವೆ. ಶನಿವಾರದಂದು 3.37 ಲಕ್ಷ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.
ಇದನ್ನೂ ಓದಿ: ಕೋವಿಡ್ ಕಠಿಣ ನಿಯಮ: ಸ್ವಂತ ಮದುವೆಯನ್ನೇ ರದ್ಧುಗೊಳಿಸಿದ ನ್ಯೂಜಿಲೆಂಡ್ ಪ್ರಧಾನಿ
ಇದೇ ಅವಧಿಯಲ್ಲಿ 525 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,87,205ಕ್ಕೆ ತಲುಪಿದೆ. ದೈನಂದಿನ ಕೋವಿಡ್ ದೃಢ ಪ್ರಮಾಣ ದರವು ಶೇ 17.78 ಆಗಿದೆ.
India reports 3,33,533 new COVID cases (4,171 less than yesterday), 525 deaths, and 2,59,168 recoveries in the last 24 hours
Active case: 21,87,205
Daily positivity rate: 17.78%) pic.twitter.com/h8Hmvjwqsj— ANI (@ANI) January 23, 2022
ಒಟ್ಟು ಸೋಂಕಿತರ ಸಂಖ್ಯೆ 3,92,37,264 ಆಗಿದ್ದು, ಈ ವರೆಗೆ 4,89,409 ಮಂದಿ ಕೊರೊನಾ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ.
ಕಳೆದ 24 ಗಂಟೆಯ ಅವಧಿಯಲ್ಲಿ 2,59,167 ಮಂದಿ ಗುಣಮುಖರಾಗಿದ್ದು, ಒಟ್ಟು 3,65,60,650 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ದೇಶದಲ್ಲಿ ಇದುವರೆಗೆ 161.92 ಕೋಟಿ ಕೋವಿಡ್ ಡೋಸ್ ಲಸಿಕೆಯನ್ನು ನೀಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.