ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 38,792 ಹೊಸ ಪ್ರಕರಣ; 624 ಸಾವು

ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ 38,792 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 624 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, 41,000 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಹೀಗಾಗಿ, ದೇಶದಲ್ಲಿ ಈವರೆಗೆ ಸೋಂಕಿತರ ಒಟ್ಟು ಸಂಖ್ಯೆ 3,09,46,074ಕ್ಕೆ ಏರಿದ್ದು, ಒಟ್ಟು 3,01,04,720 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಸದ್ಯ, 4,29,946 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ, ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 4,11,408ಕ್ಕೆ ಏರಿದೆ.

ದೇಶದಲ್ಲಿ38,76,97,935 (37,14,441 ಕಳೆದ 24 ಗಂಟೆಗಳಲ್ಲಿ) ಡೋಸ್ ಲಸಿಕೆ ವಿತರಿಸಲಾಗಿದೆ.

ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಜನರು ಮಾರುಕಟ್ಟೆಗಳು ಮತ್ತು ಪ್ರವಾಸಿ ತಾಣಗಳಲ್ಲಿ ಓಡಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರಮೋದಿ, ಕೋವಿಡ್ -19 ಸಾಂಕ್ರಾಮಿಕ ರೋಗದ ಮೂರನೇ ಅಲೆಯು ‘ತಾನಾಗಿಯೇ ಬರುವುದಿಲ್ಲ’ ಎಂದು ಹೇಳುವ ಮೂಲಕ ಜನರಿಗೆ ಎಚ್ಚರಿಕೆ ನೀಡಿದ್ದರು. ಹೊಸ ಸೋಂಕು ಪ್ರಕರಣಗಳ ಉಲ್ಬಣವನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಸಲಹೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT