ಮಂಗಳವಾರ, ಜೂನ್ 22, 2021
29 °C

Covid-19 India Updates: ಒಂದೇ ದಿನ 4.01 ಲಕ್ಷ ಹೊಸ ಪ್ರಕರಣ, 4,187 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 4,01,078 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 4,187 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 2,18,92,676 ಕ್ಕೆ ಏರಿಕೆಯಾಗಿದೆ. ಆ ಪೈಕಿ 2,38,270 ಮಂದಿ ಸಾವಿಗೀಡಾಗಿದ್ದಾರೆ.

ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 1,79,30,960 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 37,23,446 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಇದುವರೆಗೆ 16,73,46,544 ಡೋಸ್‌ ಲಸಿಕೆಯನ್ನು ವಿತರಿಸಲಾಗಿದ್ದು, ಅಭಿಯಾನ ಮುಂದುವರಿದಿದೆ.

ಮಹಾರಾಷ್ಟ್ರದಲ್ಲಿ 6,57,019, ಕರ್ನಾಟಕದಲ್ಲಿ 5,36,661, ಕೇರಳದಲ್ಲಿ 4,02,997, ಉತ್ತರಪ್ರದೇಶದಲ್ಲಿ 2,54,118, ಆಂಧ್ರಪ್ರದೇಶದಲ್ಲಿ 1,86,695, ತಮಿಳುನಾಡಿನಲ್ಲಿ 1,35,355 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ... ಭಾರತದಲ್ಲಿ ಕೋವಿಡ್‌ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ: ಕಮಲಾ ಹ್ಯಾರಿಸ್

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು