ಭಾನುವಾರ, ಸೆಪ್ಟೆಂಬರ್ 19, 2021
29 °C

Covid-19 India Update: ದೇಶದಲ್ಲಿ 44,643 ಹೊಸ ಪ್ರಕರಣಗಳು

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದಲ್ಲಿ ಶುಕ್ರವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 44,643 ಹೊಸ ಪ್ರಕರಣಗಳು ದಾಖಲಾಗಿವೆ. ಗುರುವಾರಕ್ಕಿಂತಲೂ ಕೋವಿಡ್‌ ಖಚಿತಪಟ್ಟ ಸಂಖ್ಯೆಯಲ್ಲಿ ಸುಮಾರು 2,000 ಪ್ರಕರಣಗಳು ಏರಿಕೆಯಾಗಿದೆ.

ಸತತ ಮೂರನೇ ದಿನವೂ ದೇಶದಲ್ಲಿ 40,000ಕ್ಕೂ ಅಧಿಕ ಹೊಸ ಪ್ರಕರಣಗಳು ದಾಖಲಾಗಿವೆ. ಕೋವಿಡ್‌ ದೃಢಪಟ್ಟ ಪ್ರಕರಣಗಳ ದರ ಶೇ.2.72ರಷ್ಟಿದೆ.

ಪ್ರಸ್ತುತ ದೇಶದಲ್ಲಿ 4,14,159 ಪ್ರಕರಣಗಳು ಸಕ್ರಿಯವಾಗಿದೆ. 24 ಗಂಟೆಗಳಲ್ಲಿ 41,096 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 464 ಜನ ಸಾವಿಗೀಡಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಕೊರೊನಾ ಸೋಂಕು ವಾಸಿಯಾದ 3 ತಿಂಗಳಿನಲ್ಲಿ ಕೂದಲು ಉದುರುವಿಕೆ- ತಜ್ಞರ ಕಳವಳ

ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 3.18 ಕೋಟಿ ದಾಟಿದೆ. ಈ ಪೈಕಿ 3.10 ಕೋಟಿಗೂ ಹೆಚ್ಚು ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಹಾಗೂ 4,26,754 ಜನ ಮೃತಪಟ್ಟಿದ್ದಾರೆ. ದೇಶದಾದ್ಯಂತ 49,53,27,595 ಡೋಸ್‌ ಕೋವಿಡ್‌ ಲಸಿಕೆ ಹಾಕಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು