ಮಂಗಳವಾರ, ಆಗಸ್ಟ್ 16, 2022
20 °C

ಕಪ್ಪು ಶಿಲೀಂಧ್ರ: ದೇಶದಲ್ಲಿ 45,374 ಪ್ರಕರಣ; 4,332 ಸೋಂಕಿತರು ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಇದುವರೆಗೆ ಒಟ್ಟು 45,374 ಕಪ್ಪು ಶಿಲೀಂಧ್ರ ಸೋಂಕು ಪ್ರಕರಣಗಳು ವರದಿಯಾಗಿವೆ. 4,332 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಪ್ಪು ಶಿಲೀಂಧ್ರ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವ ಡಾ. ಭಾರತಿ ಪ್ರವೀಣ್‌ ಪವಾರ್‌ ಉತ್ತರಿಸಿದರು. ಅವರು, ʼಕಪ್ಪು ಶಿಲೀಂಧ್ರ ಸೋಂಕು ಹೊಸ ಕಾಯಿಲೆಯಲ್ಲ. ಆದರೂ, ಇದನ್ನು ಸಾಂಕ್ರಾಮಿಕ ರೋಗಗಳ ಕಾಯ್ದೆ-1897 ಅಡಿಯಲ್ಲಿ ಸೇರಿಸುವಂತೆ ರಾಜ್ಯಗಳು 2021ರ ಮೇನಲ್ಲಿ ಆರೋಗ್ಯ ಸಚಿವಾಲಯವನ್ನು ಒತ್ತಾಯಿಸುವವರೆಗೆ ಹೆಚ್ಚಿನ ಗಮನ ಸೆಳೆದಿರಲಿಲ್ಲʼ ಎಂದಿದ್ದಾರೆ.

ʼಕಳೆದ ಎರಡು ತಿಂಗಳಿನಿಂದ ಕಪ್ಪು ಶಿಲೀಂಧ್ರ ಪ್ರಕರಣಗಳು ಕಡಿಮೆಯಾಗುತ್ತಿರುವುದು ಕಂಡು ಬಂದಿದೆʼ ಎಂದೂ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು