ಶುಕ್ರವಾರ, ಸೆಪ್ಟೆಂಬರ್ 30, 2022
21 °C

India Covid Update: ಹೊಸದಾಗಿ 5,076 ಪ್ರಕರಣ ದೃಢ, 5,970 ಮಂದಿ ಚೇತರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಭಾನುವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 5,076 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 11 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 47,945ಕ್ಕೆ ಇಳಿಕೆಯಾಗಿದೆ.

ಕಳೆದೊಂದು ದಿನದಲ್ಲಿ 5,970 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,39,19,264 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಇದುವರೆಗೆ 4,44,95,359 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,28,150 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: 

ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 1.58 ಮತ್ತು ವಾರದ ದೃಢ ಪ್ರಮಾಣ ಶೇ 1.72 ಆಗಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.11 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.71 ಆಗಿದೆ.

ದೇಶದಲ್ಲಿ ಈವರೆಗೆ 88.94 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 214.95 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು