ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 81 ದಿನಗಳ ಬಳಿಕ ಸೋಂಕಿತರ ಸಂಖ್ಯೆ 60 ಸಾವಿರಕ್ಕೂ ಕಡಿಮೆ

ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 58,419 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 1,576 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,81,965 ಕ್ಕೆ ಏರಿಕೆಯಾಗಿದೆ. ಆ ಪೈಕಿ 3,86,713 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 2,87,66,009 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 7,29,243 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ 1,35,708, ಕರ್ನಾಟಕದಲ್ಲಿ 1,30,894, ಕೇರಳದಲ್ಲಿ 1,07,300, ತಮಿಳುನಾಡಿನಲ್ಲಿ 78,780, ಆಂಧ್ರ ಪ್ರದೇಶದಲ್ಲಿ 65,244 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಈವರೆಗೆ 27,66,93,572 ಡೋಸ್‌ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT