ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ ಒಟ್ಟು 422 ಓಮೈಕ್ರಾನ್‌ ಪ್ರಕರಣಗಳು

Last Updated 26 ಡಿಸೆಂಬರ್ 2021, 4:17 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 6,987 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 162 ಮಂದಿ ಮೃತಪಟ್ಟಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

24 ಗಂಟೆಗಳಲ್ಲಿ 7,091 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 76,766 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ 422ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಕನಿಷ್ಠ 130 ಮಂದಿ ಗುಣಮುಖರಾಗಿದ್ದಾರೆ.

ಈವರೆಗೂ ಕೊರೊನಾ ವೈರಸ್‌ ಸೋಂಕಿನಿಂದ 3,42,30,354 ಮಂದಿ ಚೇತರಿಸಿಕೊಂಡಿದ್ದು, 4,79,682 ಮಂದಿ ಸಾವಿಗೀಡಾಗಿದ್ದಾರೆ.

ದೇಶದಾದ್ಯಂತ ಇಲ್ಲಿಯವರೆಗೂ 141.37 ಕೋಟಿ ಡೋಸ್‌ ಲಸಿಕೆ ವಿತರಣೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT