ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ

Last Updated 17 ಡಿಸೆಂಬರ್ 2021, 4:49 IST
ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ ಹೊಸದಾಗಿ 7,447 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 391 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,47,26,049 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,76,869 ಮಂದಿ ಸಾವಿಗೀಡಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 7,886 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 3,41,62,765 ಜನರು ಚೇತರಿಸಿಕೊಂಡಿದ್ದಾರೆ.

ಸದ್ಯ ದೇಶದಲ್ಲಿ 86,415 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ 136 ಕೋಟಿಗೂ ಅಧಿಕ ಡೋಸ್‌ ಕೋವಿಡ್‌–19 ಲಸಿಕೆ ವಿತರಣೆಯಾಗಿದೆ.

ಕೇರಳದಲ್ಲಿ 34,836, ಮಹಾರಾಷ್ಟ್ರದಲ್ಲಿ 10,372, ತಮಿಳುನಾಡಿನಲ್ಲಿ 7,476, ಪಶ್ಚಿಮ ಬಂಗಾಳದಲ್ಲಿ 7,506, ಕರ್ನಾಟಕದಲ್ಲಿ 7,187 ಸಕ್ರಿಯ ಪ್ರಕರಣಗಳಿವೆ.

ಕೋವಿಡ್‌–19 ರೂಪಾಂತರ ತಳಿ ‘ಓಮೈಕ್ರಾನ್‌’ ವೈರಾಣು ದೃಢಪಟ್ಟವರ ಸಂಖ್ಯೆ ದೇಶದಲ್ಲಿ ಗುರುವಾರ 87ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT