ಸೋಮವಾರ, ಆಗಸ್ಟ್ 8, 2022
24 °C

Covid-19 India Update| ಇಂದು 84 ಸಾವಿರ ಸೋಂಕು, 4,002 ಸಾವು

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದಲ್ಲಿ ಇಂದು 84,332 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 70 ದಿನಗಳಲ್ಲೇ ಇದು ಅತ್ಯಂತ ಕಡಿಮೆ ಎನಿಸಿದೆ. ಜೊತೆಗೆ 4,002 ಸಾವುಗಳು ಸಂಭವಿಸಿವೆ.

ಇಂದಿನ ಹೊಸ ಪ್ರಕರಣಗಳೂ ಸೇರಿದಂತೆ ಭಾರತದ ಒಟ್ಟಾರೆ ಸೋಂಕು ಪ್ರಕರಣಗಳು 2,93,59,155ಕ್ಕೆ ಏರಿಕೆಯಾಗಿದೆ. ಒಟ್ಟು ಸಾವುಗಳ ಸಂಖ್ಯೆ 3,67,081ಕ್ಕೆ ತಲುಪಿದೆ.

ದೇಶದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,80,690ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಈ ವರೆಗೆ 24,96,00,304 ಮಂದಿಗೆ ಲಸಿಕೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು