ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 8,603 ಕೋವಿಡ್ ಪ್ರಕರಣ ದೃಢ, 415 ಮಂದಿ ಸಾವು

Last Updated 4 ಡಿಸೆಂಬರ್ 2021, 6:23 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,603 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 415 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ 8,190 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 3,40,53,856 ಕ್ಕೆ ತಲುಪಿದೆ.

ಈವರೆಗೆ 3,46,24,360 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 4,70,530 ಮಂದಿ ಕೋವಿಡ್‌ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಸದ್ಯ ಒಟ್ಟು 99,974 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಈವರೆಗೆ 126.5 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT