ಸೋಮವಾರ, ಸೆಪ್ಟೆಂಬರ್ 26, 2022
24 °C

India Covid Updates | ಸಕ್ರಿಯ ಪ್ರಕರಣಗಳ ಸಂಖ್ಯೆ 1.11 ಲಕ್ಷಕ್ಕೆ ಇಳಿಕೆ 

ಪ್ರಜಾವಾಣಿ ವೆಬ್ ಡೆಸ್ಕ್  Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 8,813 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 29 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,42,77,194ಕ್ಕೆ ಏರಿಕೆಯಾಗಿದೆ. ಆ ಪೈಕಿ 5,27,098 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 4,36,98,844 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,11,252 ಸಕ್ರಿಯ ಪ್ರಕರಣಗಳಿವೆ.

ಪಂಜಾಬ್‌ನಲ್ಲಿ 14,645, ಮಹಾರಾಷ್ಟ್ರದಲ್ಲಿ 12,148, ಕರ್ನಾಟಕದಲ್ಲಿ 10,475, ಕೇರಳದಲ್ಲಿ 8,770, ದೆಹಲಿಯಲ್ಲಿ 7,519, ತಮಿಳುನಾಡಿನಲ್ಲಿ 7,145 ಸಕ್ರಿಯ ಪ್ರಕರಣಗಳಿವೆ. 

ದೇಶದಾದ್ಯಂತ ಒಟ್ಟು 208.31 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ಓದಿ... ಶಿವಮೊಗ್ಗ ಗಲಭೆ: ಚೂರಿ ಇರಿತದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು