Covid-19 India Update: 92,596 ಹೊಸ ಪ್ರಕರಣ, 2,219 ಸೋಂಕಿತರು ಸಾವು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 92,596 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 2,219 ಸೋಂಕಿತರು ಮೃತಪಟ್ಟಿದ್ದಾರೆ ಮತ್ತು 1,62,664 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ ಒಟ್ಟು 2,90,89,069 ಪ್ರಕರಣಗಳು ಬೆಳಕಿಗೆ ಬಂದಿದ್ದು, 3,53,528 ಮಂದಿ ಸಾವಿಗೀಡಾಗಿದ್ದಾರೆ.
ಒಟ್ಟು 2,75,04,126 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 12,31,415 ಸಕ್ರಿಯ ಪ್ರಕರಣಗಳಿವೆ. ಈವರೆಗೆ 23.90 (23,90,58,360) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
India reports 92,596 new #COVID19 cases, 1,62,664 discharges, and 2219 deaths in the last 24 hours, as per Union Health Ministry.
Total cases: 2,90,89,069
Total discharges: 2,75,04,126
Death toll: 3,53,528
Active cases: 12,31,415Total vaccination: 23,90,58,360 pic.twitter.com/m13IcoPRqe
— ANI (@ANI) June 9, 2021
ಏ. 25ರ ಹೊತ್ತಿಗೆ ದೇಶದಲ್ಲಿ 37,01,93,563 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಶನಿವಾರ ಒಂದೇ ದಿನ 19,85,967 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್) ತಿಳಿಸಿದೆ.
COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes @PIB_India @mygovindia @COVIDNewsByMIB #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/04qy02EiZV
— ICMR (@ICMRDELHI) June 9, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.